ಸ್ಥಳೀಯ ತಾ.ಪಂ ಸಭಾಭವನದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ ಪತ್ರಿಕಾ ದಿನಾಚರಣೆಯನ್ನು ಶಾಸಕ ನಿಖಿಲ ಕತ್ತಿ ಉದ್ಘಾಟಿಸಿದರು. ಚಂದ್ರಶೇಖರ ಶಿವಾಚಾರ್ಯರು, ಅಭಿನವ ಮಂಜುನಾಥ ಶ್ರೀಗಳು, ತಹಸೀಲ್ದಾರ ಬಲರಾಮ ಕಟ್ಟಿಮನಿ, ತಾ.ಪಂ ಇ.ಒ ಟಿ.ಆರ್.ಮಲ್ಲಾಡದ ಇತರರಿದ್ದರು.
ಹುಕ್ಕೇರಿ : ಸಮಾಜ ತಿದ್ದುವ ಕಾರ್ಯ ಪತ್ರಕರ್ತರದ್ದಾಗಿದೆ. ಆ ಕೆಲಸ ನಿರಂತರವಾಗಿ ಮಾಡುತ್ತಿವೆ. ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ಪತ್ರಿಕಾರಂಗ ಸಮರ್ಥವಾಗಿ ಕೆಲಸ ಮಾಡುತ್ತಿದೆ ಎಂದು ಶಾಸಕ ನಿಖಿಲ ಕತ್ತಿ ಅಭಿಪ್ರಾಯಪಟ್ಟರು.
ಪಟ್ಟಣದ ತಾಪಂ ಸಭಾಭವನದಲ್ಲಿ ಸೋಮವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಘಟಕ ಆಯೋಜಿಸಿದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ನಿತ್ಯ ಜನಸಾಮಾನ್ಯರ ಸಮಸ್ಯೆಗಳ ಬಗ್ಗೆ ಪತ್ರಿಕೆಗಳು ವರದಿ ಮಾಡಿ ಸರ್ಕಾರವನ್ನು ಎಚ್ಚರಿಸುತ್ತಿವೆ. ಯುವ ಜನಾಂಗ ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಳ್ಳದೇ ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಕ್ಯಾರಗುಡ್ ಅವುಜಿಕರ ಆಶ್ರಮದ ಅಭಿನವ ಮಂಜುನಾಥ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಸಂಘದ ತಾಲೂಕು ಘಟಕ ಅಧ್ಯಕ್ಷ ರವಿ ಕಾಂಬಳೆ ಅಧ್ಯಕ್ಷತೆ ವಹಿಸಿದ್ದರು. ನಿವ್ರತ್ತ ಪ್ರಾದ್ಯಾಪಕ ಪಿ.ಜಿ.ಕೊಣ್ಣೂರ, ಸಿಪಿಐ ಜಾವೀದ ಮುಶಾಪೂರಿ ಮಾತನಾಡಿದರು.
ಸಂಘದ ಜಿಲ್ಲಾ ಅಧ್ಯಕ್ಷ ದಿಲೀಪ ಕುರಂದವಾಡೆ ಮಾತನಾಡಿ, ಮುದ್ರಣ ಮತ್ತು ದೃಶ್ಯ ಮಾಧ್ಯಮ ಜನರಿಗೆ ಜ್ಞಾನ ನೀಡುತ್ತವೆ. ಯುವ ಜನಾಂಗ ಕೇವಲ ಮನರಂಜನೆಗೆ ಒತ್ತು ನೀಡದೇ ಜೀವನ ರೂಪಿಸುವ ಪತ್ರಿಕೆ ಓದುವ ಹವ್ಯಾಸ ರೂಢಿಸಿಕೊಳ್ಳಬೇಕೆಂದರು.ವಿವಿಧ ಕ್ಷೇತ್ರದ ಸಾಧಕರನ್ನು ಸತ್ಕರಿಸಿದರು.

ಸಂಘದ ರಾಜ್ಯ ಉಪಾಧ್ಯಕ್ಷ ಪುಂಡಲೀಕ ಬಾಳೋಜಿ, ರಾಜ್ಯ ಕಾರ್ಯಕಾರಿಣಿ ಸದಸ್ಯ ಮಲ್ಲಿಕಾರ್ಜುನರೆಡ್ಡಿ ಗೊಂದಿ, ತಹಸೀಲದಾರ ಬಲರಾಮ ಕಟ್ಟಿಮನಿ, ತಾಪಂ ಇಒ ಟಿ.ಆರ್.ಮಲ್ಲಾಡದ, ಮುಖಂಡರಾದ ಮಹಾವೀರ ನಿಲಜಗಿ, ಕಿರಣ ರಜಪೂತ, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಅವಿನಾಶ ಹೊಳೆಪ್ಪಗೋಳ, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಕೆ.ಬಿ.ಕುರಬೇಟ, ಪತ್ರಕರ್ತರಾದ ಚೇತನ ಹೊಳೆಪ್ಪಗೋಳ, ವಿಶ್ವನಾಥ ನಾಯಿಕ, ಸಚಿನ ಖೋತ, ಮಲ್ಲಿಕಾರ್ಜುನ ಗುಂಡಕಲ್ಲೆ, ರಾಮಣ್ಣಾ ನಾಯಿಕ, ಸಚಿನ ಕಾಂಬಳೆ, ರಾಜು ಕುರುಂದವಾಡೆ, ಬಿ.ಬಿ.ಕೋತೇಕರ, ಮಹಾದೇವ ನಾಯಿಕ, ರಾಜಕುಮಾರ ಬಾಗಲಕೋಟಿ, ಗಣೇಶ ಮಲಾಬಾದಿ, ಅಪ್ಪು ಹುಕ್ಕೇರಿ, ಸೋಹನ ವಾಗೋಜಿ, ಸಂಜೀವ ಮುಷ್ಟಗಿ, ಕಲ್ಲಪ್ಪಾ ಪಾಮನಾಯಿಕ ಮತ್ತಿತರರಿದ್ದರು.
ಹಿರಿಯ ಪತ್ರಕರ್ತ ಸಂಜು ಮುತಾಲಿಕ ಸ್ವಾಗತಿಸಿದರು. ಶಿಕ್ಷಕ ಶಿವಾನಂದ ಪಾಟೀಲ ನಿರೂಪಿಸಿದರು. ಮಹಾದೇವ ನಾಯಿಕ ವಂದಿಸಿದರು.





