ಮಾಜಿ ಸಚಿವ ದಿ.ಉಮೇಶ ಕತ್ತಿ ಅವರ ಭಾವಚಿತ್ರ.
ಹುಕ್ಕೇರಿ : ರಾಜ್ಯ ರಾಜಕಾರಣದಲ್ಲಿ ಹುಕ್ಕೇರಿ ಮತಕ್ಷೇತ್ರದಿಂದ ೮ ಶಾಸಕರಾಗಿ ೬ ಬಾರಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಜನನಾಯಕ, ಉತ್ತರ ಕರ್ನಾಟಕಕ್ಕೆ ಅನ್ಯಾಯವಾದಾಗ ಗಟ್ಟಿ ಧ್ವನಿಯಲ್ಲಿ ಹೋರಾಟ ಮಾಡುತ್ತಿದ್ದ ಮಾಜಿ ಸಚಿವ ದಿ.ಉಮೇಶ ಕತ್ತಿ ಅವರ ಜೀವನದ ಕಥಾ ಹಂದರ ಒಳಗೊಂಡ ಗ್ರಂಥವನ್ನು ಬುಧವಾರ ಸೆ. ೨೪ ರಂದು ಬೆಳಗ್ಗೆ ೧೧ ಕ್ಕೆ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ವಿಶ್ವರಾಜ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಲೋಕಾರ್ಪಣೆ ಸಮಾರಂಭ ಆಯೋಜಿಸಲಾಗಿದೆ.
ನಿಡಸೋಸಿ ಸಿದ್ದಸಂಸ್ಥಾನ ಮಠದ ಪಂಚಮ ಡಾ.ಶಿವಲಿಂಗೇಶ್ವರ ಸ್ವಾಮೀಜಿ, ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ವಿರಕ್ತಮಠದ ಶಿವಾನಂದ ಸ್ವಾಮೀಜಿ, ಶಿವಬಸವ ಸ್ವಾಮೀಜಿ, ಕ್ಯಾರಗುಡ್ ಅವುಜೀಕರ ಆಶ್ರಮದ ಅಭಿನವ ಮಂಜುನಾಥ ಸ್ವಾಮೀಜಿ ಸಾನಿಧ್ಯ ವಹಿಸುವರು. ದೆಹಲಿ ವಿಶೇಷ ಪ್ರತಿನಿಧಿಯಾಗಿರುವ ಎಂಎಲ್ಸಿ ಪ್ರಕಾಶ ಹುಕ್ಕೇರಿ ಅಧ್ಯಕ್ಷತೆ ವಹಿಸುವರು. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವರು. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಜ್ಯೋತಿ ಪ್ರಜ್ವಲಿಸುವರು. ಮಾಜಿ ಸಚಿವ ಎ.ಬಿ.ಪಾಟೀಲ ಕಿರುಚಿತ್ರ ಬಿಡುಗಡೆಗೊಳಿಸುವರು. ಮಾಜಿ ಸಿಎಂ ಜಗದೀಶ ಶೆಟ್ಟರ ಗ್ರಂಥ ಬಿಡುಗಡೆ ಮಾಡಲಿದ್ದಾರೆ.
ಕೆಎಲ್ಇ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದರಾದ ಗೋವಿಂದ ಕಾರಜೋಳ, ಈರಣ್ಣಾ ಕಡಾಡಿ, ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರಾದ ಲಕ್ಷ್ಮಣ ಸವದಿ, ರಾಜು ಕಾಗೆ, ಅಶೋಕ ಪಟ್ಟಣ, ಅಭಯ ಪಾಟೀಲ, ಗಣೇಶ ಹುಕ್ಕೇರಿ, ದುರ್ಯೋದನ ಐಹೊಳೆ, ಬಾಬಾಸಾಹೇಬ ಪಾಟೀಲ, ಬಸನಗೌಡಾ ಪಾಟೀಲ ಯತ್ನಾಳ, ಮಹಾಂತೇಶ ಕೌಜಲಗಿ, ರಾಜು ಶೇಠ್, ವಿಶ್ವಾಸ ವೈದ್ಯ, ಮಾಜಿ ಶಾಸಕರಾದ ಮಹಾಂತೇಶ ಕವಟಗಿಮಠ, ಮುರುಗೇಶ ನಿರಾಣಿ, ಮಹಾದೇವಪ್ಪ ಯಾದವಾಡ ಮತ್ತು ಎಂ.ಎಲ್.ಸಿ ಸಿ.ಟಿ.ರವಿ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.
ವಿಶ್ವನಾಥ ಕತ್ತಿ ಧರ್ಮಾರ್ಥ ಟ್ರಸ್ಟ್, ರಾಜೇಶ್ವರಿ ಕತ್ತಿ ಧರ್ಮಾರ್ಥ ಟ್ರಸ್ಟ್ ಹಾಗೂ ಉಮೇಶ ಕತ್ತಿ ಅಭಿಮಾನಿಗಳ ಬಳಗದಿಂದ ಈ ಸಮಾರಂಭ ಆಯೋಜಿಸಲಾಗಿದ್ದು ಕತ್ತಿ ಕುಟುಂಬದ ಹಿತೈಷಿಗಳು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಮಾರಂಭ ಯಶಸ್ವಿಗೊಳಿಸಬೇಕೆಂದು ಮಾಜಿ ಸಂಸದ ರಮೇಶ ಕತ್ತಿ, ಶಾಸಕ ನಿಖಿಲ್ ಕತ್ತಿ, ಯುವ ಮುಖಂಡರಾದ ಪೃಥ್ವಿ ಕತ್ತಿ, ಪವನ ಕತ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





