ತಾಲೂಕಿನ ಇಸ್ಲಾಂಪೂರದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ

ಹುಕ್ಕೇರಿ: ಸರಕಾರಿ ಶಾಲೆಗಳಲ್ಲಿ ತಜ್ಞ ಶಿಕ್ಷಕರಿಂದ ಪಾಠ ಮಾಡಿಸಲಾಗುತ್ತಿದೆ.ಗುಣಮಟ್ಟದ ಶಿಕ್ಷಣ ದೊರಕುವುದರಿಂದ ಪಾಲಕರು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗಳಲ್ಲಿ ಓದಿಸಬೇಕೆಂದು ಚಿಕ್ಕೋಡಿ ಶೈಕ್ಷಣೀಕ ಜಿಲ್ಲಾ ಡಿಡಿಪಿಐ ಸೀತಾರಾಮ ವಿನಂತಿಸಿದರು.

   ಶುಕ್ರವಾರದಂದು ತಾಲೂಕಿನ ಇಸ್ಲಾಂಪೂರ ಸರಕಾರಿ ಪ್ರೌಢಶಾಲೆಯಲ್ಲಿ 2025-26 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿದರು. ಮಕ್ಕಳ ಕಲಿಕೆಗಾಗಿ ಸರ್ಕಾರ ಹಲವಾರು ಸೌಲಭ್ಯಗಳನ್ನು ನೀಡುತ್ತಿದ್ದು, ಅವುಗಳ ಸದುಪಯೋಗ ಪಡಿಸಿಕೊಂಡು ಗುಣಮಟ್ಟದ ಶಿಕ್ಷಣ ಪಡೆದುಕೊಳ್ಳುವುದರ ಜತೆಗೆ ಸರಕಾರಿ ಶಾಲೆಗಳನ್ನು ಬಲಪಡಿಸಬೇಕೆಂದರು.

ಇದೇ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ ರ‍್ಯಾಂಕ ಪಡೆದ ವಿದ್ಯಾರ್ಥಿಗಳನ್ನು ಹಾಗೂ ಅಧಿಕಾರಿಗಳನ್ನು ಸನ್ಮಾನಿಸಿದರು.ನಂತರ ಉಚಿತ ಪಠ್ಯಪುಸ್ತಕ ಹಾಗೂ ಸಮಸ್ತಗಳನ್ನು ವಿತರಿಸಲಾಯಿತು.

ತಾಲೂಕಿನ ಇಸ್ಲಾಂಪೂರ ಸರಕಾರಿ ಪ್ರೌಢಶಾಲೆಯಲ್ಲಿ 2025-26ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಡಿಡಿಪಿಐ ಸೀತಾರಾಮ, ತಹಸೀಲ್ದಾರ ಮಂಜುಳಾ ನಾಯಕ ಇತರರನ್ನು ಸನ್ಮಾನಿಸಿದರು. ಪ್ರಭಾವತಿ ಪಾಟೀಲ, ಎ.ಎಸ್.ಪದ್ಮನ್ನವರ, ಸವಿತಾ ಹಲಕಿ, ಮಹಾದೇವಿ ಕುಡವಕ್ಕಲಿಗ ಇತರರಿದ್ದರು.

       ತಹಸೀಲ್ದಾರ ಮಂಜುಳಾ ನಾಯಕ, ಬಿ.ಇ.ಒ ಪ್ರಭಾವತಿ ಪಾಟೀಲ, ಬಿ.ಆರ್.ಸಿ ಸಮನ್ವಯಾಧಿಕಾರಿ ಎ.ಎಸ್.ಪದ್ಮನ್ನವರ, ಪ್ರಧಾನ ಮಂತ್ರಿ ಪೋಷನ್ ಅಭಿಯಾನ್ ಸಹಾಯಕ ನಿರ್ದೇಶಕಿ ಸವಿತಾ ಹಲಕಿ, ಮುಖ್ಯೋಪಾಧ್ಯಾಯಿನಿ ಮಹಾದೇವಿ ಕುಡವಕ್ಕಲಿಗ, ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಸಹಾಯಕ ಜಂಗ್ಲಿಸಾಬ ನಾಯಿಕ, ಲಗಮಣ್ಣಾ ಪಣಗುತ್ತಿ, ಗ್ರಾಮ ಪಂಚಾಯತಿ ಪದಾಧಿಕಾರಿಗಳು, ಮತ್ತಿತರರಿದ್ದರು.

Join Our WhatsApp Channel
Join Now

Leave a Reply

Your email address will not be published. Required fields are marked *

error: Content is protected !!
This website uses cookies to ensure you get the best experience on our website. Details
Decline
Accept