ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ ತಾಲೂಕಾಧ್ಯಕ್ಷರಾಗಿ ಆಯ್ಕೆಯಾದ ಬಿ.ಎಸ್.ಖೇಮಾಳಿ ಭಾವಚಿತ್ರ.
ಹುಕ್ಕೇರಿ: ಕರ್ನಾಟಕ ರಾಜ್ಯ ಸರ್ಕಾರ ನಿವೃತ್ತ ನೌಕರರ ಸಂಘ ತಾಲೂಕಾ ಘಟಕದ ಅಧ್ಯಕ್ಷರಾಗಿ ಆರೋಗ್ಯ ಇಲಾಖೆ ನಿವೃತ್ತ ನೌಕರ ಬಿ.ಎಸ್.ಖೇಮಾಳಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿದರು.
ಸ್ಥಳೀಯ ಸರಕಾರಿ ಆಸ್ಪತ್ರೆಯಲ್ಲಿ ಇತ್ತೀಚೆಗೆ ನಡೆದ ನಿವೃತ್ತ ನೌಕರರ ಸಂಘದ ಸಭೆಯಲ್ಲಿ ಬೆಳಗಾವಿ ಜಿಲ್ಲಾ ಅಧ್ಯಕ್ಷ ಎಸ್.ಜಿ.ಸಿದ್ನಾಳ ,ರಾಜ್ಯ ಸಂಚಾಲಕ ಬಿ.ಆಯ್.ಹೊಳೆಯಾಚಿ ಅವರ ನೇತೃತ್ವದಲ್ಲಿ ತಾಲೂಕಾ ಘಟಕದ ಪದಾಧಿಕಾರಿಗಳ ಆಯ್ಕೆ ಜರುಗಿತು.
ಕಾರ್ಯದರ್ಶಿ ಸುರೇಶ ಶೇಬನ್ನವರ, ಖಜಾಂಚಿ ಬಿ.ಎಲ್.ದೇವರ್ಷಿ , ಉಪಾಧ್ಯಕ್ಷ ಎಸ್.ಎಂ ಸನದಿ, ಸಾಂಸ್ಕೃತಿಕ, ಕ್ರೀಡಾ ಕಾರ್ಯದರ್ಶಿಯಾಗಿ ಎಸ್.ಬಿ.ಯಡಹಳ್ಳಿ ಆಯ್ಕೆಯಾದರು. ಸಂಘದ ನಿಕಟಪೂರ್ವ ಅಧ್ಯಕ್ಷ ಕಿಶೋರ ಶಿರಗೆ ಇತರರಿದ್ದರು.





