ಹುಕ್ಕೇರಿ : ಸ್ಥಳೀಯ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದ ಚಂದ್ರಶೇಖರ ಶಿವಾಚಾರ್ಯರರು ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಆಯ್ಕೆಯಾದ ಪ್ರಯುಕ್ತ ಅವರನ್ನು ಮಹಾವೀರ ಉದ್ಯೋಗ ಸಮೂಹ ಸಂಸ್ಥೆ ಮತ್ತು ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಯಿಂದ ಸತ್ಕರಿಸಿದರು.
ಶನಿವಾರದಂದು ಮಹಾವೀರ ಶಿಕ್ಷಣ ಸಂಸ್ಥೆ ಆವರಣದಲ್ಲಿ ನಡೆದ ಸತ್ಕಾರ ಕಾರ್ಯಕ್ರಮದಲ್ಲಿ ಮಹಾವೀರ ಉದ್ಯೋಗ ಸಮೂಹ ಸಂಸ್ಥೆಯ ಅಧ್ಯಕ್ಷ ಮಹಾವೀರ ನಿಲಜಗಿ, ಪ್ರಜ್ವಲ ನಿಲಜಗಿ, ಪದ್ಮಶ್ರೀ ನಿಲಜಗಿ, ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆ ಅಧ್ಯಕ್ಷ ಅಶೋಕ ಪಾಟೀಲ, ಅನಿಲ ಪಾಟೀಲ, ಶಾಶ್ವತ ಪಾಟೀಲ, ಅಂಜನಾ ಗುಗ್ಗಳಿ, ರಾಘವೇಂದ್ರ ತಳವಾರ, ಸಂಗಮೇಶ ಕರಹೊನ್ನವರ ಇತರರಿದ್ದರು.
ಚಂದ್ರಶೇಖರ ಶಿವಾಚಾರ್ಯರಿಗೆ ಮಹಾವೀರ ಉದ್ಯೋಗ ಸಮೂಹ ಸಂಸ್ಥೆ ಮತ್ತು ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಯಿಂದ ಸತ್ಕಾರ

Join Our WhatsApp Channel
Join Now



