ಮಾ. 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ನಿಯಮಾನುಸಾರ ಸುಗಮವಾಗಿ ನಡೆಸಲು ತಹಸೀಲ್ದಾರ್ ಬಲರಾಮ ಕಟ್ಟಿಮನಿ ಸೂಚನೆ

ಸ್ಥಳೀಯ ತಾಲೂಕಾ ಪಂಚಾಯತ ಸಭಾಭವನದಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷಾ ಪೂರ್ವ ಸಿದ್ಧತಾ ಸಭೆಯಲ್ಲಿ ತಹಸೀಲ್ದಾರ ಬಲರಾಮ ಕಟ್ಟಿಮನಿ ಮಾತನಾಡಿದರು. ಟಿ.ಆರ್.ಮಲ್ಲಾಡದ, ಪ್ರಭಾವತಿ ಪಾಟೀಲ ಮಾತನಾಡಿದರು.

ಹುಕ್ಕೇರಿ: ಮಾರ್ಚ್ 18ರಿಂದ ಆರಂಭವಾಗಲಿರುವ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯನ್ನು ಪೌಢಶಿಕ್ಷಣ ಪರೀಕ್ಷಾ ಮಂಡಳಿಯ ಮಾರ್ಗ ಸೂಚಿಯಂತೆ ಯಾವುದೇ ಲೋಪ ದೋಷಗಳಿಲ್ಲದೆ ಅತ್ಯಂತ ಜಾಗರೂಕತೆಯಿಂದ ಮತ್ತು ಸುಗಮವಾಗಿ ನಡೆಸಬೇಕೆಂದು ತಹಸೀಲ್ದಾರ ಬಲರಾಮ ಕಟ್ಟಿಮನಿ, ಮಾತನಾಡಿದರು.

ಅವರು ಪಟ್ಟಣದ ಸೋಮವಾರ ತಾಲೂಕಾ ಪಂಚಾಯತಿ ಸಭಾ ಭವನದಲ್ಲಿ ಆಯೋಜಿಸಲಾಗಿದ್ದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದರು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಯಾವುದೇ ಆಕ್ರಮ ಚಟುವಟಿಕೆಗಳು ನಡೆಯದಂತೆ ನೋಡಿಕೊಳ್ಳಬೇಕು.

ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಟಿ.ಆರ್, ಮಲ್ಲಾಡದ ಮಾತನಾಡಿ. ಪರೀಕ್ಷೆ ಪ್ರಾರಂಭದ ಮುಂಚೆ ಮಕ್ಕಳಲ್ಲಿ ಪರೀಕ್ಷಾ ಭಯವನ್ನು ದೂರ ಮಾಡಿ, ಅವರು ಸರಳ ಹಾಗೂ ಸುಲಲಿತವಾಗಿ ಪರೀಕ್ಷೆ ಬರೆಯುವಂತೆ ಪ್ರೇರೆಪಿಸಬೇಕೆಂದರು.

ಬಿ.ಇ.ಒ ಪ್ರಭಾವತಿ ಪಾಟೀಲ ಮಾತನಾಡಿ ಎಸ್.ಎಸ್.ಎಲ್.ಸಿ ಪರೀಕ್ಷೆ ನ್ಯಾಯಸಮ್ಮತ ಮತ್ತು ಯಶಸ್ವ್ವಿಯಾಗಿ ನಡೆಯಲು ೧೯ ಕೇಂದ್ರಗಳಿದ್ದು ಅವುಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಮುಖ್ಯ ಅಧೀಕ್ಷಕರು, ಉಪ ಮುಖ್ಯ ಅಧೀಕ್ಷಕರು, ಪ್ರಶ್ನೆ ಪತ್ರಿಕೆ ಕಸ್ಟೋಡಿಯನ್ಸ್, ಮೊಬೈಲ್ ಸ್ಕಾ÷್ವಡ್, ಶಾಂತಿ ಸುವ್ಯವಸ್ಥೆಗೆ ಅರಕ್ಷಕರು, ಮಾರ್ಗ ಅಧಿಕಾರಿಗಳು, ತಾಲೂಕಾ ಜಾಗೃತ ದಳ, ಸ್ಥಾನಿಕ ಜಾಗೃತ ದಳ ಸಿಬ್ಬಂದಿ, ತಾಲೂಕಾ ಮಟ್ಟದ ಅಧಿಕಾರಿಗಳು, ಅಂತರ ಜಿಲ್ಲಾ ವಿಚಕ್ಷಣಾ ಜಾಗೃತದಳ ತಂಡ, ಆರೋಗ್ಯ ಕೌಂಟರಗಳು ಸೇರಿದಂತೆ ಪರೀಕ್ಷಾ ಕಾರ್ಯಕ್ಕೆ ೫೫೦ ಸಿಬ್ಬಂದಿ ನಿಯೋಜಿಸಲಾಗಿದೆ ಎಂದರು.

ತಾಲೂಕಾ ಸಮಾಜ ಕಲ್ಯಾಣ ಅಧಿಕಾರಿ ಜಿ.ಡಿ.ಪಾವಟೆ, ಅಕ್ಷರ ದಾಸೋಹ ಇಲಾಕೆ ಸಹಾಯಕ ನಿರ್ದೇಶಕಿ ಸವಿತಾ ಹಲಕಿ. ಬಿ.ಆರ್.ಸಿ ಎ,ಕೆ ಪದ್ಮಣ್ಣವರ ಮತ್ತು ನಿಯೋಜಿತ ಅಧಿಕಾರಿಗಳಿದ್ದರು.

Join Our WhatsApp Channel
Join Now
error: Content is protected !!
This website uses cookies to ensure you get the best experience on our website. Details
Decline
Accept