ಅಂಬೇಡ್ಕರ್ ಹಾಗೂ ಜಗಜೀವನ್ ರಾಂ ಜಯಂತಿ ಅದ್ದೂರಿ ಆಚರಣೆಗೆ ತಹಶೀಲ್ದಾರ್ ಬಲರಾಮ ಕಟ್ಟಿಮನಿ ಕರೆ

ಸ್ಥಳೀಯ ತಾ.ಫ ಸಭಾಭವನದಲ್ಲಿ ಡಾ.ಬಾಬು ಜಗಜೀವನ್ ರಾಮ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಪೂರ್ವಭಾವಿ ಸಭೆಯ ದೃಶ್ಯ.

ಹುಕ್ಕೇರಿ: ಹಸಿರು ಕ್ರಾಂತಿ ಹರಿಕಾರ, ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಂ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಈ ಇಬ್ಬರು ಮಹೋದಯರ ಜಯಂತೋತ್ಸವವನ್ನು ಕಾರ್ಯಕ್ರಮಗಳನ್ನು ಅದ್ದೂರಿಯಾಗಿ ಆಚರಿಸಲು ಸಮಾಜದ ಮುಖಂಡರ ಸಹಕಾರಿ ಅವಶ್ಯವಾಗಿದೆ ಎಂದು ತಹಶೀಲ್ದಾರ ಬಲರಾಮ ಕಟ್ಟಿಮನಿ ಹೇಳಿದರು.

ಅವರು ಮಂಗಳವಾರದ0ದು ಸ್ಥಳೀಯ ತಾಲೂಕಾ ಪಂಚಾಯತ ಭವನದ ಸಭಾಂಗಣದಲ್ಲಿ ಡಾ.ಬಾಬು ಜಗಜೀವನ್ ರಾಂ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಆಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಮೇ ೦೫ ರಂದು ಭಾರತದ ಮಾಜಿ ಉಪ ಪ್ರಧಾನಮಂತ್ರಿ ಹಾಗೂ ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ್ ರಾಂ ಅವರ 119ನೇ ಜಯಂತೋತ್ಸವ ಮತ್ತು ಏ.14 ರಂದು ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 135 ನೇ ಜಯಂತೋತ್ಸವ ಕಾರ್ಯಕ್ರಮಗಳನ್ನು ತಾಲೂಕಾ ಆಡಳಿತ ಸಹಯೋಗದೊಂದಿಗೆ ಅದ್ದೂರಿಯಾಗಿ ಆಚರಿಸಲಾಗುವುದು. ಇದಕ್ಕೆ ಬೇಕಾದ ಸಕಲ-ಸಿದ್ಧತೆ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಮಾಜ ಕಲ್ಯಾಣ ಅಧಿಕಾರಿ ಜಿ,ಟಿ. ಪಾವಟೆ ಮಾತನಾಡಿ ಪ್ರ.ಧಾನಮಂತ್ರಿ ಹಾಗೂ ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ್ ರಾಮ ಜಯಂತಿ ಕಾರ್ಯಕ್ರಮ ಮಿನಿ ವಿಧಾನಸೌಧ ಬಳಿಯ ಬಾಬು ಜಿಗಜೀವನರಾಮ ಭವನದಲ್ಲಿ ಏರ್ಪಡಿಸಲಾಗುವುದು. ಅಂದು ಬೆಳಿಗ್ಗೆ ಮೆರವಣಿಗೆ ನಡೆಯಲಿದೆ. ಏ.14 ರಂದು ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮವನ್ನು ತಾಲೂಕಾ ಪಂಚಾಯತ ಹೊರಾಂಗಣದಲ್ಲಿ ನಡೆಯಲಿದೆ. ಮೆರವಣಿಗೆಯಲ್ಲಿ ಎಲ್ಲಾ ಸಂಘ-ಸ0ಸ್ಥೆಗಳ ಮುಖಂಡರು, ಪದಾಧಿಕಾರಿಗಳು, ತಾಲೂಕಾ ಮಟ್ಟದ ಅಧಿಕಾರಿಗಳು ಮತ್ತು ಸಾರ್ವಜನಿಕರು ಹೆಮ್ಮೆಯಿಂದ ಭಾಗವಹಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಟಿ.ಆರ್. ಮಲ್ಲಾಡದ, ಮುಖ್ಯಾಧಿಕಾರಿ ಈಶ್ವರ ಸಿದ್ನಾಳ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶ್ಯಾನೂರ ತಹಸೀಲ್ದಾರ, ಮುಖಂಡರಾದ ಉದಯ ಹುಕ್ಕೇರಿ, ರಮೇಶ ಹುಂಜಿ, ಕೆಂಪಣ್ಣಾ ಶಿರಹಟ್ಟಿ, ಬಾವುಸಾಬ ಪಾಂಡ್ರೆ, ಪ್ರಕಾಶ ಮೈಲಾಖೆ, ಶ್ರೀಕಾಂತ ತಳವಾರ, ಎ.ಜಿ. ಮೆಲಗೇರಿ, ಕಾಡೇಶ ಹೊಸಮನಿ, ಶಿವಾನಂದ ಸಮಕ್ಕನವರ ಮತ್ತಿತರರಿದ್ದರು.

Join Our WhatsApp Channel
Join Now
error: Content is protected !!
This website uses cookies to ensure you get the best experience on our website. Details
Decline
Accept