ಮಹಾವೀರ ಮಲ್ಟಿಪರ್ಪಜ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಮಹಾವೀರ ನಿಲಜಗಿ ಅವರ ಭಾವಚಿತ್ರ
ಹುಕ್ಕೇರಿ : ಹುಕ್ಕೇರಿಯ ಪ್ರತಿಷ್ಠಿತ ಮಹಾವೀರ ಮಲ್ಟಿಪರ್ಪಜ್ ಸೌಹಾರ್ದ ಸಹಕಾರಿ ಸಂಘವು ಪ್ರಗತಿ ಪಥದತ್ತ ಸಾಗಿದ್ದು ೩.೫೫ ಕೋಟಿ ರೂ ನಿವ್ವಳ ಲಾಭ ಗಳಿಸಿದೆ ಎಂದು ಅಧ್ಯಕ್ಷ ಮಹಾವೀರ ನಿಲಜಗಿ ಹೇಳಿದರು.
ಪಟ್ಟಣದಲ್ಲಿ ಶನಿವಾರ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನ ಜತೆಗೆ ಜಿಲ್ಲೆ ವಿವಿಧೆಡೆ ಇರುವ ಬಡ, ಮಧ್ಯಮ ವರ್ಗದ ಜನರು, ಕೂಲಿಕಾರರು, ಬೀದಿ ವ್ಯಾಪಾರಸ್ಥರು, ಸಣ್ಣ ಉದ್ದಿಮೆದಾರರ ಆರ್ಥಿಕ ಮಟ್ಟ ಸುಧಾರಣೆ ಸದುದ್ದೇಶದಿಂದ ಎರಡು ದಶಕಗಳ ಹಿಂದೆ ಆರಂಭವಾದ ಸಂಸ್ಥೆ ಸುದೀರ್ಘ ಪಯಣವನ್ನು ಯಶಸ್ವಿಯಾಗಿ ಪೂರೈಸಿ ಇಂದು ಹೆಮ್ಮರವಾಗಿ ಬೆಳೆದಿದೆ. 15151 ಜನ ಸದಸ್ಯರನ್ನು ಹೊಂದಿರುವ ಸಹಕಾರಿ ಪ್ರಸಕ್ತ ವರ್ಷಾಂತ್ಯಕ್ಕೆ 1183 ಕೋಟಿ ರೂ ವಹಿವಾಟು ನಡೆಸಿದೆ. 42 ಲಕ್ಷ ಶೇರು ಬಂಡವಾಳವಿದ್ದು 10 ಕೋಟಿ ಕಾಯ್ದಿಟ್ಟ ಹಾಗೂ ಇತರೆ ನಿಧಿಗಳಿವೆ.೩೧೫ ಕೋಟಿ ದುಡಿಯುವ ಬಂಡವಾಳವಿದ್ದು 250 ಕೋಟಿ ರೂ ಸಾಲ ವಿತರಿಸಲಾಗಿದೆ.280 ಕೋಟಿ ಠೇವು ಸಂಗ್ರಹಿಸಿ 38 ಕೋಟಿ ಹೂಡಿಕೆಗಳೊಂದಿಗೆ 3.55 ಕೋಟಿ ರೂ ನಿವ್ಹಳ ಲಾಭ ಗಳಿಸಿದೆ ಎಂದು ಅವರು ವಿವರಿಸಿದರು.
ಈಗಾಗಲೇ ಪ್ರಧಾನ ಕಚೇರಿ ಸೇರಿ ಒಟ್ಟು 17 ಶಾಖೆಗಳೊಂದಿಗೆ ಸದ್ಯ ನಾಲ್ಕು ಜಿಲ್ಲೆಗಳಲ್ಲಿ ತನ್ನ ಕಾರ್ಯಕ್ಷೇತ್ರ ವಿಸ್ತರಿಸಿಕೊಂಡಿದೆ. ಮುಂಬರುವ ದಿನಗಳಲ್ಲಿ ಹಾವೇರಿ, ಗದಗ, ಕಾರವಾರ, ಶಿವಮೊಗ್ಗ ಜಿಲ್ಲೆಯಲ್ಲಿ ನೂತನ ಶಾಖೆಗಳನ್ನು ತೆರೆಯಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ನಿರ್ದೇಶಕರಾದ ಸಂಜಯ ನಿಲಜಗಿ, ಕಿರಣ ಸೊಲ್ಲಾಪುರೆ, ಅಶೋಕ ಪಾಟೀಲ, ಪ್ರಧಾನ ವ್ಯವಸ್ಥಾಪಕ ರಾಜೇಂದ್ರ ಪಾಟೀಲ, ಶಾಖಾ ವ್ಯವಸ್ಥಾಪಕ ಸಂತೋಷಸಿAಗ್ ರಜಪೂತ, ಪ್ರವೀಣ ಪಾಟೀಲ ಮತ್ತಿತರರಿದ್ದರು.