ಹುಕ್ಕೇರಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯವರಿಂದ ಜರುಗಿದ ‘ಸಾಮೂಹಿಕ ಮಹಾಲಕ್ಷ್ಮೀ ಪೂಜೆ ಮತ್ತು ಧಾರ್ಮಿಕ ಸಭಾ ಉದ್ಘಾಟಿಸಿದರು. ಅಭಿನವ ಮಂಜುನಾಥ ಶ್ರೀಗಳು, ಮಹಾವೀರ ನಿಲಜಗಿ, ಎ.ಕೆ.ಪಾಟೀಲ, ಚಂದ್ರಶೇಖರ ಗಂಗನ್ನವರ ಇತರರಿದ್ದರು.
ಮಹಿಳೆಯರ ಸ್ವಾವಲಂಬಿ ಜೀವನಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಹಳ ಸಹಕಾರಿಯಾಗಿದೆ. ಪ್ರತಿಯೊಂದು ಊರಲ್ಲೂ ರಚಿಸಿರುವ ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರು ಆರ್ಥಿಕವಾಗಿ ಸಬಲರಾಗಿದ್ದಾರೆ ಎಂದು ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರ ಸಂಘದ ಅಧ್ಯಕ್ಷ ಮಹಾವೀರ ನಿಲಜಗಿ ಹೇಳಿದರು.
ಮಂಗಳವಾರ ಪಟ್ಟಣದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ನಡೆದ ‘ಸಾಮೂಹಿಕ ಮಹಾಲಕ್ಷ್ಮೀ ಪೂಜೆ ಮತ್ತು ಧಾರ್ಮಿಕ ಸಭಾ” ಉದ್ಘಾಟಿಸಿ ಮಾತನಾಡಿದರು.
ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು ಪತ್ನಿ ಜತೆ ಸೇರಿ ಧಾರ್ಮಿಕ, ಆಧ್ಯಾತ್ಮಿಕ, ಶೈಕ್ಷಣಿಕ ಮತ್ತು ಅನ್ನ ದಾಸೋಹದಂತಹ ಕಾರ್ಯದ ಮೂಲಕ ಸಮಾಜಮುಖಿ ಕಾರ್ಯ ಮಾಡುತ್ತಿರುವುದು ಎಲ್ಲರಿಗೂ ಮಾದರಿಯಾಗಿದೆ ಎಂದರು.
ಮುಸ್ಲಿಂ ಸಮುದಾಯದ ಮುಖಂಡರಾದ ಸಲೀಮ ಕಳಾವಂತ ಮತ್ತು ಇರ್ಷಾದ ಮೊಕಾಶಿ ಮಾತನಾಡಿ, ಧರ್ಮಾತೀತವಾಗಿ ಸಾಮಾನ್ಯ ಜನರಿಗೆ ಸಹಾಯ ಮಾಡುತ್ತಿರುವ ಧರ್ಮಸ್ಥಳ ಯೋಜನೆಯ ಕಾರ್ಯದ ಲಾಭವನ್ನು ಪ್ರತಿಯೊಬ್ಬರು ಪಡೆಯಬೇಕೆಂದರು.
ಧರ್ಮಸ್ಥಳ ಯೋಜನಾ ಜಿಲ್ಲಾ ನಿರ್ದೇಶಕ ವಿಠ್ಠಲ್ ಸಾಲ್ಯಾನ್, ನಿವೃತ್ತ ಪ್ರಾಧ್ಯಾಪಕ ಪಿ.ಜಿ.ಕೊಣ್ಣೂರ, ಮುಖಂಡ ಚಂದ್ರಶೇಖರ ಗಂಗನ್ನವರ, ಒಕ್ಕೂಟದ ಅಧ್ಯಕ್ಷೆ ಸುರೇಖಾ ಮತ್ತಿಕೊಪ್ಪ ಸಭೆಯನ್ನುದ್ಧೇಶಿಸಿ ಮಾತನಾಡಿದರು. ಅವಜೀಕರ ಆಶ್ರಮದ ಅಭಿನವ ಮಂಜುನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಹುಕ್ಕೇರಿ ಪುರಸಭೆ ಮಾಜಿ ಅಧ್ಯಕ್ಷ ಎ.ಕೆ.ಪಾಟೀಲ, ಉಪಾಧ್ಯಕ್ಷೆ ಜ್ಯೋತಿ ಬಡಿಗೇರ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷೆ ಮಂಜುಳಾ ಪಾಟೀಲ, ಯೋಜನಾಧಿಕಾರಿ ಶ್ರೀಕಾಂತ ನಾಯ್ಕ, ವಲಯ ಮೇಲ್ವಿಚಾರಕ ಎಂ. ಸತೀಶ್, ಬಾಗೇವಾಡಿಯ ಫಕ್ಕಿರೇಶ್ ಜಂಗಲಿ, ಒಕ್ಕೂಟದ ಅಧ್ಯಕ್ಷೆ ರೇಣುಕಾ ಮನ್ನಿಕೇರಿ, ಸೇವಾ ಪ್ರತಿನಿಧಿಗಳಿದ್ದರು. ಯೋಜನಾಧಿಕಾರಿ ಶ್ರೀಕಾಂತ ನಾಯ್ಕ ಸ್ವಾಗತಿಸಿದರು. ವಲಯ ಮೇಲ್ವಿಚಾರಕ ಫಕ್ಕಿರೇಶ್ ಜಂಗಲಿ ನಿರೂಪಿಸಿದರು. ವಲಯ ಮೇಲ್ವಿಚಾರಕ ಸತೀಶ ಎಂ. ವಂದಿಸಿದರು.





