ಸ್ಥಳೀಯ ತಾ.ಪಂ ಸಭಾಭವನದಲ್ಲಿ ನಡೆದ ತಾಲೂಕು ಮಟ್ಟದ ಟಾಸ್ಕ್ ಪೋರ್ಸ್ ಸಭೆಯಲ್ಲಿ ಶಾಸಕ ನಿಖಿಲ್ ಕತ್ತಿ ಮಾತನಾಡಿದರು. ತಹಶೀಲ್ದಾರ ಮಂಜುಳಾ ನಾಯಕ, ತಾಪಂ ಇಒ ಟಿ.ಆರ್.ಮಲ್ಲಾಡದ ಇತರರಿದ್ದರು.
ಹುಕ್ಕೇರಿ : ಕಡು ಬೀಸಿಲಿಗೆ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆಯಾಗಬಾರದು.ಇದರ ಜತೆಗೆ ಜಾನುವಾರುಗಳಿಗೆ ಮೇವಿನ ಸಮಸ್ಯೆ ಆಗದಂತೆ ತಾಲೂಕಾಡಳಿತ ಮುನ್ನೆಚ್ಚರಿಕೆ ವಹಿಸಬೇಕು.ಅಧಿಕಾರಿಗಳು ಕರ್ತವ್ಯದಲ್ಲಿ ಅಲಕ್ಷ್ಯ ವಹಿಸಿದರೆ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಶಾಸಕ ನಿಖಿಲ ಕತ್ತಿ ಎಚ್ಚರಿಸಿದರು.
ಸ್ಥಳೀಯ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಗುರುವಾರ ಸಂಜೆ ನಡೆದ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ನಿಖಿಲ್ ಕತ್ತಿ ಎಚ್ಚರಿಕೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸದ್ಯ ಎದುರಾಗಿರುವ ಭೀಕರ ಬೇಸಿಗೆಯನ್ನು ತಾಲೂಕಾಡಳಿತ ಸಮರ್ಥವಾಗಿ ನಿಭಾಯಿಸಬೇಕು. ಈ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಆದೇಶಿಸಿದರು.
ಪ್ರಸ್ತುತ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು. ನೀರು ಪೂರೈಕೆಯಾಗುವ ಪರಿಸರದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಕಾಲ ಕಾಲಕ್ಕೆ ನೀರು ಪರೀಕ್ಷೆ ನಡೆಸಬೇಕು ಎಂದರು.
ಜಾನುವಾರುಗಳಿಗೆ ಅಗತ್ಯ ಮೇವು ಸಂಗ್ರಹಿಸಿಟ್ಟುಕೊಳ್ಳಬೇಕು. ಮೇವು ಕೊರತೆ ಕಂಡು ಬಂದಲ್ಲಿ ಜಾನುವಾರುಗಳನ್ನು ಬೆಳವಿಯ ಗೋ ಶಾಲೆಗೆ ಕಳುಹಿಸಿಕೊಡಬೇಕು. ಜಲಜೀವನ (ಜೆಜೆಎಂ) ಮೀಷನ್ ಅಡಿಯಲ್ಲಿ ಕೈಗೆತ್ತಿಕೊಂಡ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಗ್ರಾಪಂಗಳಿಗೆ ಹಸ್ತಾಂತರಿಸಬೇಕು. ಕುಡಿಯುವ ನೀರಿನ ಉದ್ದೇಶಕ್ಕೆ ಮತ್ತು ಕೃಷಿ ಚಟುವಟಿಕೆಗಳಿಗೆ ಹಿಡಕಲ್ ಜಲಾಶಯ ಹಾಗೂ ಮಹಾರಾಷ್ಟ್ರದ ಚಿತ್ರಿ ಜಲಾಶಯದಿಂದ ನೀರು ಹರಿಬಿಡಲು ಪ್ರಯತ್ನಿಸಲಾಗುವುದು ಎಂದು ಅವರು ತಿಳಿಸಿದರು.
ಹುಕ್ಕೇರಿ ಪಟ್ಟಣದಲ್ಲಿ ಸಾರ್ವಜನಿಕರ ಕುಡಿಯುವ ನೀರಿನ ಪೈಪ್ಗಳಿಗೆ ಧಕ್ಕೆಯಾಗದಂತೆ ಒಳಚರಂಡಿ (ಯುಜಿಡಿ) ಯೋಜನೆ ಕಾಮಗಾರಿ ಅನುಷ್ಠಾನಗೊಳಿಸಬೇಕೆಂದು ಸೂಚಿಸಿದರು.
ತಹಶೀಲ್ದಾರ ಮಂಜುಳಾ ನಾಯಕ, ತಾಪಂ ಇಒ ಟಿ.ಆರ್.ಮಲ್ಲಾಡದ, ಸಿಪಿಐಗಳಾದ ಮಹಾಂತೇಶ ಬಸಾಪೂರ, ಶಿವಶರಣ ಅವಜಿ, ಉಪತಹಶೀಲ್ದಾರ ಕೆ.ಸಿ.ಏಶಿ, ಕಂದಾಯ ನಿರೀಕ್ಷಕ ಮಲ್ಲಿಕಾರ್ಜುನ ಸಾರಾಪುರೆ, ತಾಪಂ ಮ್ಯಾನೇಜರ ಅವಿನಾಶ ಹೊಳೆಪ್ಪಗೋಳ, ಮುಖಂಡರಾದ ರಾಜು ಮುನ್ನೋಳಿ, ಆನಂದ ಲಕ್ಕುಂಡಿ, ಚನ್ನಪ್ಪ ಗಜಬರ, ಶಿವನಗೌಡ ಪಾಟೀಲ ಮತ್ತಿತರರಿದ್ದರು.ತಾ.ಪಂ ಯೋಜನಾಧಿಕಾರಿ ಪ್ರಶಾಂತ ಮುನ್ನೋಳಿ ಸ್ವಾಗತಿಸಿದರು. ನರೇಗಾ ಸಹಾಯಕ ನಿರ್ದೇಶಕ ಪಿ.ಲಕ್ಷ್ಮೀನಾರಾಯಣ ನಿರೂಪಿಸಿದರು. ಎಡಿಪಿಆರ್ ರಾಜು ಢಾಂಗೆ ವಂದಿಸಿದರು.